ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ ಯೋಜನೆ ಬದಲಿಸದಂತೆ ಆಗ್ರಹ: ಸಿಎಂ ಭೇಟಿಯಾದ ಎಚ್‌ಡಿಕೆ ನೇತೃತ್ವದ ನಿಯೋಗ

ಮುಖ್ಯಮಂತ್ರಿ ಭೇಟಿಮಾಡಿದ ಎಚ್‌ಡಿಕೆ ನೇತೃತ್ವದ ನಿಯೋಗ
Last Updated 6 ಸೆಪ್ಟೆಂಬರ್ 2021, 17:02 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗ, ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಮೂಲ ಸ್ವರೂಪದಲ್ಲೇ ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಮತ್ತು ಶಾಸಕರ ಜತೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಎಚ್‌.ಡಿ. ಕುಮಾರಸ್ವಾಮಿ, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಎತ್ತಿನಹೊಳೆ ಯೋಜನೆಯ ಅನುಷ್ಠಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಸೇರಿದಂತೆ ಹಲವು ನೀರಾವರಿ ಯೋಜನೆಗಳ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಭೇಟಿ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಕುಮಾರಸ್ವಾಮಿ, ‘ಎತ್ತಿನಹೊಳೆ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಈಗ ಇರುವ ಯೋಜನೆಯ ಪ್ರಕಾರ ಕಾಮಗಾರಿ ಮುಂದುವರಿದರೆ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಯಾವ ಜಿಲ್ಲೆಗೂ ನೀರು ಹರಿಸಲು ಆಗುವುದಿಲ್ಲ. ಯೋಜನೆಯಲ್ಲಿ ಮಾಡಿರುವ ಬದಲಾವಣೆಯಿಂದ ಆಗುವ ಸಮಸ್ಯೆ ಕುರಿತು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದ್ದೇನೆ. ಮೂಲ ಸ್ವರೂಪದಲ್ಲೇ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿದ್ದೇವೆ’ ಎಂದರು.

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಇರುವ ತೊಡಕುಗಳ ನಿವಾರಣೆಗೂ ಮನವಿ ಮಾಡಲಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ನೀರಿನ ಹಂಚಿಕೆಯ ವ್ಯಾಜ್ಯದಿಂದಾಗಿ ರಾಜ್ಯಕ್ಕೆ ತೊಂದರೆ ಆಗುವ ಅಪಾಯವಿದೆ. ಆದ್ದರಿಂದ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮಂಡಳಿಯ ತೀರ್ಪನ್ನು ಅಧಿಸೂಚನೆಯಲ್ಲಿ ಪ್ರಕಟಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT