ಬೆಂಗಳೂರು: ‘ನನ್ನಿಂದ ಅಧಿಕಾರ ಕಸಿದಾಗ ಇದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿಗೆ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು, ‘ಜನಹಿತದ ಲಾಕ್ಡೌನ್ ಘೋಷಿಸಬೇಕು. ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್ ಇರಬೇಕು ಎಂಬ ಜೆಡಿಎಸ್ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್ ಅತ್ಯಂತ ಕಡಿಮೆ. ಇದು ಅವೈಜ್ಞಾನಿಕ, ಅಸಮರ್ಪಕ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಲಾಕ್ಡೌನ್ ಮಾಡಿ ಎಂದು ನಾನು ಮಾರ್ಚ್ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್ನಲ್ಲೇ ಲಾಕ್ಡೌನ್ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್ ಕೂಡ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?’ ಎಂದು ಪ್ರಶ್ನಿಸಿದ್ದಾರೆ.
‘ಪ್ಯಾಕೇಜ್ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಕಾಣುತ್ತಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್ ಹಿಗ್ಗುತ್ತದೆ ಎಂಬ ಭಯವೇ?’ ಎಂದು ವಾಗ್ದಾಳಿ ನಡೆಸಿದ್ದಾರೆ.
‘2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್ಡೌನ್ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?' ಎಂದು ಟೀಕಿಸಿದ್ದಾರೆ.
‘ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಬಿಎಸ್ವೈ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?’ ಎಂದು ಕುಟುಕಿದ್ದಾರೆ.
ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?
— H D Kumaraswamy (@hd_kumaraswamy) May 19, 2021
3/9
ಲಾಕ್ಡೌನ್ ಮಾಡಿ ಎಂದು ನಾನು ಮಾರ್ಚ್ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್ನಲ್ಲೇ ಲಾಕ್ಡೌನ್ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?
— H D Kumaraswamy (@hd_kumaraswamy) May 19, 2021
2/9
ಪ್ಯಾಕೇಜ್ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್ ಹಿಗ್ಗುತ್ತದೆ ಎಂಬ ಭಯವೇ?
— H D Kumaraswamy (@hd_kumaraswamy) May 19, 2021
5/9
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.