ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ 'ಷರತ್ತು ಸಹಿತ' ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ.2/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 2, 2023
ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ 'ಪ್ರಸಕ್ತ ಸಾಲಿಗೆ ಮಾತ್ರ' ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ.4/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 2, 2023
ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರಕಾರ'ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 2, 2023