ಬೆಂಗಳೂರು: ಅಂತರ್ ಜಿಲ್ಲಾ ಸಂಚಾರ ಮತ್ತು ಪರಿಸ್ಥಿತಿ ಗಂಭೀರವಾಗಿರುವ ಇತರ ಜಿಲ್ಲೆಗಳಲ್ಲೂ ಲಾಕ್‌ಡೌನ್ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್‌ಡೌನ್‌ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ. ಕರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್‌ಡೌನ್ ಅನ್ನು ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ,’ ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ದಿನದಿಂದದಿನಕ್ಕೆ ಹೆಚ್ಚಾಗುತ್ತಲೇ ಇರುವ ಕಾರಣಕ್ಕೆ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್‌ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ. ಇದೇ 14ರಿಂದ ಒಂದು ವಾರಗಳ ಕಾಲ, ಅಂದರೆ, 22ರ ಬೆಳಗ್ಗೆ ವರೆಗೆ ಲಾಕ್‌ಡೌನ್ ಜಾರಿಯಲ್ಲಿ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.