ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಎಂ ಕಿಸಾನ್‌: ರಾಜ್ಯದ ಕಾರ್ಯಕ್ರಮಕ್ಕೆ ಎಚ್‌ಡಿಕೆ ನೇತೃತ್ವ

Published 18 ಜೂನ್ 2024, 0:30 IST
Last Updated 18 ಜೂನ್ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ 17ನೇ ಕಂತಿನ ಸಹಾಯಧನ ವಿತರಣೆ ಮಂಗಳವಾರ ನಡೆಯಲಿದ್ದು, ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾರಂಭದ ನೇತೃತ್ವವನ್ನು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ.

ಮಂಗಳವಾರ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ವಿತರಣೆಗೆ ಚಾಲನೆ ನೀಡುವರು. ಅದೇ ಸಮಯದಲ್ಲಿ ದೇಶದಾದ್ಯಂತ 51 ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಏಕಕಾಲಕ್ಕೆ ಸಮಾರಂಭ ನಡೆಯಲಿದೆ. ಪ್ರತಿ ಕಾರ್ಯಕ್ರಮಕ್ಕೂ ಒಬ್ಬ ಕೇಂದ್ರ ಸಚಿವರನ್ನು ನಿಯೋಜಿಸಲಾಗಿದೆ.

ರಾಜ್ಯಮಟ್ಟದ ಕಾರ್ಯಕ್ರಮವು ಧಾರವಾಡದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ನೇತೃತ್ವವನ್ನು ಕುಮಾರಸ್ವಾಮಿ ವಹಿಸಲಿದ್ದಾರೆ.

ರಾಜ್ಯದವರೇ ಆಗಿರುವ ಕೇಂದ್ರ ರೈಲ್ವೆ ಖಾತೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ತೆಲಂಗಾಣ ರಾಜ್ಯದ ಕರೀಂನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವ ವಹಿಸುವರು. ಕಾರ್ಮಿಕ ಹಾಗೂ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳುನಾಡಿನ ನಾಮಕ್ಕಲ್‌ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT