‘ಮುಖ್ಯಮಂತ್ರಿ ತಮ್ಮ ಪುತ್ರನಿಗೆ ಕಾನೂನು ಬಾಹಿರವಾಗಿ ಸಾಂವಿಧಾನಿಕ ಹುದ್ದೆ ನೀಡಿದ್ದು, ಈ ಬಗ್ಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಸೋಮವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಪುತ್ರನಿಂದ ಅಧಿಕಾರಿಗಳ ವರ್ಗಾವಣೆ ಹೆಚ್ಚಾಗಿದೆ. ಅಧಿಕಾರಿಗಳನ್ನು ವರ್ಗಾವಣೆ ಮಾಡುವುದಾಗಿ ಹೆದರಿಸಿ ಹಣ ವಸೂಲಿ ಮಾಡಲಾಗುತ್ತದೆ’ ಎಂದು ಆರೋಪಿಸಿದರು.