ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಮಾರಸ್ವಾಮಿ ಒಬ್ಬ ಹುಚ್ಚ: ಡಿ.ಕೆ. ಶಿವಕುಮಾರ್

Published 5 ಜುಲೈ 2024, 15:16 IST
Last Updated 5 ಜುಲೈ 2024, 15:16 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. 

ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಪತ್ನಿ ಹೆಸರಿಗೆ ನಿವೇಶನ ಹಂಚಿಕೆಯಾಗಿರುವ ಮೈಸೂರಿನ ‘ಮುಡಾ’ ಪ್ರಕರಣ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಕೈವಾಡವಿದೆ. ಆಗ ಸಿ.ಡಿ ಆಯಿತು, ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ’ ಎಂಬ ಕುಮಾರಸ್ವಾಮಿ ಆರೋಪ ಆಧಾರ ರಹಿತ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಬಹಳ ಸಂತೋಷದ ವಿಚಾರ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT