ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ವಸತಿ ಯೋಜನೆ ಕಾಮಗಾರಿ ಅಕ್ರಮ: ಸೋಮಶೇಖರ್‌ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

Last Updated 19 ಸೆಪ್ಟೆಂಬರ್ 2022, 16:28 IST
ಅಕ್ಷರ ಗಾತ್ರ

ಬೆಂಗಳೂರು: ಬಿಡಿಎ ವಸತಿ ಯೋಜನೆ ಕಾಮಗಾರಿಯ ಗುತ್ತಿಗೆದಾರರಿಂದ ಲಂಚ ಪಡೆದ ಆರೋಪದಡಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿರುವುದರಿಂದ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಸೋಮಶೇಖರ್‌ ಅವರು ಬಿಡಿಎ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನೀಡಿದ್ದ ಗುತ್ತಿಗೆಯಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಈಗ ಅವರು ಮಂತ್ರಿಯಾಗಿದ್ದಾರೆ. ಸಚಿವರಾಗಿ ಮುಂದುವರಿದರೆ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಸತ್ಯವನ್ನು ಮರೆಮಾಚುವ ಅಪಾಯವೂ ಇರುತ್ತದೆ. ಆದ್ದರಿಂದ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವುದು ಸೂಕ್ತ’ ಎಂದರು.

ಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಾನು ಭ್ರಷ್ಟಾಚಾರ ಮಾಡಿಲ್ಲ ಎಂದು ಶಿವಕುಮಾರ್‌ ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಉತ್ತರಿಸುವ ಸಾಮರ್ಥ್ಯ ಅವರಿಗೆ ಇದೆ’ ಎಂದು ಹೇಳಿದರು.

ಆಪ್‌ ಪ್ರತಿಭಟನೆ: ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಆರೋಪಿ ಎಂದು ಹೆಸರಿಸಿರುವ ಕಾರಣದಿಂದ ಸೋಮಶೇಖರ್‌ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಕ್ಷದ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT