ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ ವಿರೋಧಿಸಿದ್ದ ಮಿತ್ರಪಕ್ಷಗಳು: ಕುಮಾರಸ್ವಾಮಿ

Published 19 ಸೆಪ್ಟೆಂಬರ್ 2023, 17:07 IST
Last Updated 19 ಸೆಪ್ಟೆಂಬರ್ 2023, 17:07 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಿಳಾ ಮೀಸಲಾತಿ ಮಸೂದೆಯನ್ನು ದೇವೇಗೌಡರು ಪ್ರಧಾನಿಯಾಗಿದ್ದಾಗಲೇ (1996) ರಾಜ್ಯಸಭೆಯಲ್ಲಿ ಮಂಡಿಸಿದ್ದರು. ಇಂದು ಐಎನ್‌ಡಿಐಎ ಜತೆ ಗುರುತಿಸಿಕೊಂಡಿರುವವರೇ ಅಂದು ವಿರೋಧಿಸಿದ್ದರು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಎಕ್ಸ್ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮಹಿಳಾ ಮೀಸಲಾತಿ ಮಸೂದೆ 27 ವರ್ಷಗಳ ನಂತರ ಸಾಕಾರಗೊಳ್ಳುತ್ತಿದೆ. ದೇಶದಾದ್ಯಂತ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಮೂಲಕಾರಣ ದೇವೇಗೌಡರು. ಅಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆ ಲೋಕಸಭೆಯಲ್ಲಿ ಬಿದ್ದು ಹೋಯಿತು. ಅವರ ಜತೆ ಅಧಿಕಾರ ಹಂಚಿಕೊಂಡಿದ್ದ ಸಂಯುಕ್ತರಂಗದ ಮಿತ್ರಪಕ್ಷಗಳ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು’ ಎಂದಿದ್ದಾರೆ.

‘1995ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ್ದರು.  ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶ ಕಲ್ಪಿಸುವುದು ಇಂದಿನ ತುರ್ತು ಅಗತ್ಯ. ಅದಕ್ಕಾಗಿ ಎಲ್ಲ ಪಕ್ಷಗಳೂ ಮಸೂದೆ ಬೆಂಬಲಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT