ಬೆಂಗಳೂರು: ‘ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಿರುವ ನೋಟಿಸ್ ಅನುಸಾರ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂಬ ಈ ಹಿಂದಿನ ಆದೇಶವನ್ನು ಹೈಕೋರ್ಟ್ ಮತ್ತೆ ವಿಸ್ತರಿಸಿದೆ.

ಈ ಕುರಿತಂತೆ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಾದ ಮಂಡಿಸಿದ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರು ‘ಕರ್ನಾಟಕ ಭೂ ಕಂದಾಯ ಕಾಯ್ದೆ–1964ಕ್ಕೆ ತಿದ್ದುಪಡಿ ತರುವ ಮೂಲಕ ಸರ್ಕಾರಿ ಜಮೀನು ಒತ್ತುವರಿ ಕುರಿತಂತೆ ಒತ್ತುವರಿದಾರರಿಂದ ವಿವರಣೆ ಪಡೆದು ಮುಂದಿನ ಕ್ರಮ ಜರುಗಿಸಲು ತಹಶೀಲ್ದಾರ್ಗೆ ಅಧಿಕಾರ ಕಲ್ಪಿಸಿರುವ ಕಾನೂನನ್ನು ನಾವು ಪ್ರಶ್ನಿಸಲಿದ್ದೇವೆ. ಈ ಕುರಿತಂತೆ ನಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಿ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ತಿದ್ದುಪಡಿ ರಿಟ್ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಇದೇ 8ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.