ಬೆಂಗಳೂರು: ‘ಎಚ್.ಡಿ. ಕುಮಾರಸ್ವಾಮಿ ಅವರ ಚರಿತ್ರೆಯನ್ನು ನಾನಿನ್ನೂ ಬಿಚ್ಚಿಡಲು ಶುರು ಮಾಡಿಲ್ಲ. ಅವರಂತೆ ನಾನು ಗೊಡ್ಡು ಬೆದರಿಕೆ ಹಾಕುವವನಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಎಲ್ಲ ರೀತಿಯ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ. ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಈ ಬಗ್ಗೆ ಚಕಾರ ಎತ್ತುತ್ತಲೇ ಇಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿಯಂತೂ ಮೋದಿ ಅವರಿಗೆ ಹೇಳಿ ಬೆಲೆ ಇಳಿಸುವ ಬದಲು ನನ್ನ ವಿರುದ್ಧ ಟನ್ಗಟ್ಟಲೆ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರಂತೆ’ ಎಂದರು.

‘ಟನ್ಗಟ್ಟಲೆ ದಾಖಲೆಗಳನ್ನು ಇಟ್ಟುಕೊಂಡಿದ್ದರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲವೇಕೆ? ಮಿಸ್ಟರ್ ಕುಮಾರಸ್ವಾಮಿ, ಈ ಡಿ.ಕೆ. ಶಿವಕುಮಾರ್ ನಿನ್ನ ಹಾಗೂ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ. ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು, ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂಬುದನ್ನು ನಾನಿನ್ನು ಬಿಚ್ಚಿಟ್ಟಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ಬಿಜೆಪಿಯ ಕೀಳು ವ್ಯಕ್ತಿಯೊಬ್ಬ ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾನೆ. ವಿಧಾನಸೌಧದಲ್ಲಿ ಅತ್ಯಾಚಾರ ಎಸಗಿದ ಸಂಬಂಧ ಆತನ ವಿರುದ್ಧ ಪ್ರಕರಣಗಳಿವೆ. ಎಲ್ಲವೂ ಸಾಬೀತಾಗುತ್ತಿವೆ. ಆತ ಆಡಿರುವ ಮಾತುಗಳು ಸಾಬೀತಾಗಿವೆ. ಇವರ ಆಟಗಳೆಲ್ಲಾ ನಡೆಯುವುದಿಲ್ಲ. 2028ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.