ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಡ್ಜ್ ನೀರು, ತಂಪು ಪಾನೀಯ ಬಳಕೆ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ

Published 3 ಮೇ 2024, 16:12 IST
Last Updated 3 ಮೇ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ‘ಫ್ರಿಡ್ಜ್‌ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಚಾರ್ಯರು, ಮೇ 2ರಂದು ಹೊರಡಿಸಿರುವ ಪ್ರಕಟಣೆಯಲ್ಲಿ ‘ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್‌ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹಾಗಾಗಿ, ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್‌ಕ್ರೀಮ್ ಸೇವಿಸಬಾರದು’ ಎಂದು ತಿಳಿಸಲಾಗಿತ್ತು. ಈ ಪ್ರಕಟಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ‘ಇದು ಸತ್ಯಕ್ಕೆ ದೂರವಾದ ಮಾಹಿತಿ‘ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT