ಬೆಂಗಳೂರು: ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ’ ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್ಸಿ) ಹಾಗೂ ಪರಿಶಿಷ್ಟ ಪಂಗಡದವರಿಗೆ (ಎಸ್ಟಿ) ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಈಯೋಜನೆಯಡಿಎಸ್ಸಿ ಮತ್ತುಎಸ್ಟಿ ವರ್ಗದವರಿಗೆಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ಒದಗಿಸಲು ಸರ್ಕಾರ ನಿರ್ಧರಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ.ಕುಸುಮ ರೋಗ, ಥಲಸೀಮಿಯಾ, ಸಿಕಲ್ ಸೆಲ್ ಅನಿಮಿಯಾ ಮೊದಲಾದ ವಿರಳ ಕಾಯಿಲೆಗಳಿಗೆ ಯೋಜನೆಯಡಿ ಈ ಮೊದಲು ಚಿಕಿತ್ಸೆ ದೊರೆಯುತ್ತಿರಲಿಲ್ಲ. ಆದ್ದರಿಂದಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವಿರಳ ಕಾಯಿಲೆಗಳ ಚಿಕಿತ್ಸೆ ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜತೆಗೆ ಅಧಿಕ ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನಗಳನ್ನು ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿಗೆ ಕ್ರಮ ವಹಿಸಲಾಗಿದೆ.

ವಿರಳ ಕಾಯಿಲೆ ಹಾಗೂ ಅಧಿಕ ವೆಚ್ಚ ತಗುಲುವ ಚಿಕಿತ್ಸೆಗೆಗಿರಿಜನ ಉಪಯೋಜನೆಯಡಿ ₹ 7.39 ಕೋಟಿ, ಪರಿಶಿಷ್ಟ ಜಾತಿ ಉಪಯೋಜನೆಯಡಿ ₹ 15.79 ಕೋಟಿ ಮೊತ್ತವನ್ನು ಸರ್ಕಾರ ಪುನರ್ ವಿನಿಯೋಗದ ಮೂಲಕ ಬಿಡುಗಡೆ ಮಾಡಿ ಆದೇಶಿಸಿದೆ.

ದರ ನಿಗದಿ:ಪಿಇಟಿ ಸ್ಕ್ಯಾನ್‌ಗೆ ₹ 10 ಸಾವಿರ, ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ ₹ 7 ಲಕ್ಷ ಹಾಗೂ ₹ 21 ಲಕ್ಷ, ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ₹ 1.50 ಲಕ್ಷ ಸೇರಿ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ.

‘ಪ್ರಧಾನಿ ನರೇಂದ್ರ ಮೋದಿಯವರು ಬಡ ಜನರ ಆರೋಗ್ಯ ರಕ್ಷಣೆಗಾಗಿ ಜಾರಿ ಮಾಡಿದ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ವಿಸ್ತರಿಸುವ ಕೆಲಸವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಇದರಿಂದ ಬಹಳಷ್ಟು ಪ್ರಯೋಜನವಾಗಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.