ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಲು ಅಥವಾ ಒಳಪಡದೇ ಇರಲು ಲಿಖಿತ ಘೋಷಣೆ ಸಲ್ಲಿಸುವ ಅವಧಿಯನ್ನು ನ.25ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರು ಅವರ ಕುಟುಂಬದ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಆರೋಗ್ಯ ಸಂಜೀವಿನಿ ಯೋಜನೆ ಅ.1ರಿಂದ ಆರಂಭವಾಗಿದ್ದು, ಅ.18 ರ ಒಳಗೆ ತಮ್ಮ ಮೇಲಧಿಕಾರಿಗಳ ಮೂಲಕ ಲಿಖಿತ ಆಕ್ಷೇಪ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಬಹುತೇಕ ನೌಕರರು ಭಾಗವಹಿಸಿದ್ದ ಕಾರಣ ಯೋಜನೆ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅವಕಾಶ ಆಗಿರಲಿಲ್ಲ. ಹಾಗಾಗಿ, ಲಿಖಿತ ಘೋಷಣೆ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.