ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಗೌರಿಶಂಕರ್‌ ವಿರುದ್ಧದ ಅರ್ಜಿ ವಿಚಾರಣೆ ಆರಂಭ

Last Updated 1 ಜೂನ್ 2022, 20:14 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಆರಂಭಿಸಿದೆ.

ಈ ಸಂಬಂಧ ಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ.ಸುರೇಶ್ ಗೌಡ ಪರ ಹಿರಿಯ ವಕೀಲೆ ನಳಿನಾ ಮಾಯೇಗೌಡ ವಾದ ಮಂಡನೆ ಆರಂಭಿಸಿದ್ದು, ಮುಂದಿನ ವಿಚಾರಣೆಯನ್ನು ಇದೇ 6ಕ್ಕೆ ನಿಗದಿಗೊಳಿಸಲಾಗಿದೆ.

ಕೋರಿಕೆ ಏನು?: ‘2018ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವ್ಯಾಪಕ ಚುನಾವಣಾ ಅಕ್ರಮ ಎಸಗಿ ಆಯ್ಕೆಯಾಗಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 123 ಅನ್ನು ಉಲ್ಲಂಘಿಸಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಗುಂಪು ಆರೋಗ್ಯ ವಿಮಾ ಪಾಲಿಸಿಯ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಆರಿಸಿ ಬಂದಿದ್ದಾರೆ. ಹಾಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT