ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆರು ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ

Published 29 ಮಾರ್ಚ್ 2024, 15:40 IST
Last Updated 29 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಂಭವವಿದೆ. ಮುಂದಿನ ಮೂರು ದಿನಗಳು ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ. 

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ (40.9 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ಹಾಗೂ ಚಾಮರಾಜನಗರದಲ್ಲಿ ಕನಿಷ್ಠ (19.5 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT