ಬೆಂಗಳೂರು: ಮುಂದಿನ ಒಂದು ವಾರ ಕರಾವಳಿಯಲ್ಲಿ ಭಾರಿ ಮಳೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ 16ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಹಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಸಾಧಾರಣ ಮಳೆಯಾಗುವ ಸಂಭವವಿದೆ. ಹಾವೇರಿ, ಬಾಗಲಕೋಟೆ, ಗದಗ, ಬೀದರ್, ಧಾರವಾಡ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ವಿಜಯನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.