ಕಲಬುರ್ಗಿ/ಬೀದರ್: ಕಲಬುರ್ಗಿ ಮತ್ತು ಬೀದರ್ ಜಿಲ್ಲೆಯ ವಿವಿಧೆಡೆ ಸೋಮವಾರ ಧಾರಾಕಾರ ಮಳೆಯಾಯಿತು.

ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಮತಖೇಡದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಭಾಲ್ಕಿ ತಾಲ್ಲೂಕಿನ ನಾವದಗಿಯಲ್ಲಿ ಹನುಮಾನ ಮಂದಿರ ಕುಸಿದಿದೆ.

ಭಾಲ್ಕಿ ತಾಲ್ಲೂಕಿನ ಏನಕೂರ್ ಮತ್ತು ಹುಲಸೂರು ತಾಲ್ಲೂಕಿನ ಗೋರಟಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ತಾಲ್ಲೂಕಿನ ಕಾರಂಜಾ ಜಲಾಶಯ, ಬಸವಕಲ್ಯಾಣ ಸಮೀಪದ ಚುಳಕಿನಾಲಾ ಹಾಗೂ ಮುಲ್ಲಾಮರಿ ಮೇಲ್ದಂಡೆ ಜಲಾಶಯ ಭರ್ತಿಯಾಗಿವೆ.

ಚಿಟಗುಪ್ಪ ತಾಲ್ಲೂಕಿನ ಬೇಮಳಖೇಡದಲ್ಲಿ ಅತಿ ಹೆಚ್ಚು 8.1 ಸೆಂ.ಮೀ. ಮತ್ತು ಹುಮನಾಬಾದ್ ತಾಲ್ಲೂಕಿನ ದುಬಲಗುಂಡಿಯಲ್ಲಿ 6.7 ಸೆಂ.ಮೀ ಮಳೆ ದಾಖಲಾಗಿದೆ.

ಕಲಬುರ್ಗಿ ನಗರ ಸೇರಿದಂತೆ ಚಿಂಚೋಳಿ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯ ತುಂಬಿದ್ದು ಇಲ್ಲಿಂದ 1,820 ಕ್ಯುಸೆಕ್, ನಾಗರಾಳ ಜಲಾಶಯದಿಂದ 1,060 ಕ್ಯುಸೆಕ್ ನೀರು ಹೊರ ಬಿಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಚಿಂಚೋಳಿಯಲ್ಲಿ 7.4 ಸೆಂ.ಮೀ, ಕುಂಚಾವರಂ–4.0 ಸೆಂ.ಮೀ ಮಳೆ ದಾಖಲಾಗಿದೆ.

ಮಂಗಳೂರು ವರದಿ: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2–3 ದಿನದಿಂದ ಮಳೆ ಸುರಿಯುತ್ತಿದೆ. ಸೋಮವಾರ ಮಳೆಯಿಂದಾಗಿ ಒಂದು ಮನೆಗೆ ಭಾಗಶಃ ಹಾನಿಯಾಗಿದೆ.

ಉಡುಪಿ ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ ಸುರಿಯಿತು. ಸೆ.1ರವರೆಗೆ ಜಿಲ್ಲೆಯಾದ್ಯಂತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.