ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಸ್ಥಳಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.