ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ ಸಾಧ್ಯತೆ

Published 28 ಆಗಸ್ಟ್ 2024, 15:58 IST
Last Updated 28 ಆಗಸ್ಟ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ರಾಮನಗರ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಗಾಳಿಯ ವೇಗವು 30ರಿಂದ 40 ಕಿ.ಮೀ.ಗೆ ತಲುಪಬಹುದು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸುವುದರಿಂದ ಮೀನುಗಾರರು ಎಚ್ಚರ ವಹಿಸಬೇಕು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಭಾಗದಲ್ಲಿ ಸೆಪ್ಟೆಂಬರ್‌ 3ರವರೆಗೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. 

ಶುಕ್ರವಾರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT