ಮೈಸೂರು/ದಾವಣಗೆರೆ: ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಹೋಬಳಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹಾಗೂ ಮಂಡ್ಯ ಜಿಲ್ಲೆಯ ನಾಗಮಂಗಲ, ಮಳವಳ್ಳಿ ಸುತ್ತಮುತ್ತ ಶುಕ್ರವಾರ ಬಿರುಸಿನ ಮಳೆಯಾಯಿತು. ಮೈಸೂರು ನಗರ, ಎಚ್.ಡಿ.ಕೋಟೆ, ಶ್ರೀರಂಗಪಟ್ಟಣ, ಹಲಗೂರು, ಕೆ.ಆರ್.ಪೇಟೆಗಳಲ್ಲಿ ಸೋನೆ ಮಳೆ ಸುರಿಯಿತು.

ದಾವಣಗೆರೆ ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆ ಸುರಿಯಿತು. ನಗರದಲ್ಲಿ ಬೆಳಿಗ್ಗೆಯಿಂದಲೇ ಪ್ರಖರ ಬಿಸಿಲಿನ ವಾತಾವರಣ ಇತ್ತು. ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ರಭಸವಾಗಿ ಸುರಿಯಿತು. ಆ ಬಳಿಕ ಕೆಲ ಹೊತ್ತು ತುಂತುರು ಮಳೆಯಾಯಿತು.

ನ್ಯಾಮತಿ, ಚನ್ನಗಿರಿ, ಮಲೇಬೆನ್ನೂರು ಭಾಗದಲ್ಲೂ ಮಳೆ ಸುರಿಯಿತು. ಮಳೆಯಿಂದಾಗಿ ಜಿಲ್ಲೆಯ ಕೆಲವೆಡೆ ಭತ್ತದ ಕಟಾವಿಗೆ ತೊಂದರೆಯಾಗಿದೆ.

ಶಿವಮೊಗ್ಗ ನಗರ ಹಾಗೂ ಭದ್ರಾವತಿ, ಚಿತ್ರದುರ್ಗದ ಧರ್ಮಪುರದಲ್ಲಿ ಜೋರು ಮಳೆ ಸುರಿಯಿತು.

ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಿದೆ.

ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಶನಿವಾರ, ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ (40–50 ಕಿ.ಮೀ ) ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.

ಉಳಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ 6 ಸೆಂ.ಮೀ, ರದ್ದೇವಾಡಗಿ ಅರ್ಗ್, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ತಲಾ 5 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.