ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

DNP ಮೃತ ಹೆಣ್ಣುಮಕ್ಕಳ ಉತ್ತರಾಧಿಕಾರಿಗೂ ಆಸ್ತಿಯಲ್ಲಿ ಸಮಪಾಲು: ಹೈಕೋರ್ಟ್

Published 6 ಜನವರಿ 2024, 16:13 IST
Last Updated 6 ಜನವರಿ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ಮೃತ ಹೆಣ್ಣು ಮಕ್ಕಳ ಕಾನೂನುಬದ್ಧ ಉತ್ತರಾಧಿಕಾರಿಯೂ ಆಸ್ತಿಯಲ್ಲಿ ಸಮಾನ ಪಾಲು ಪಡೆಯಹುದು’ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಚನ್ನಬಸಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ವಜಾಗೊಳಿಸಿದ್ದಾರೆ.

‘ಹಿಂದೂ ಉತ್ತರಾಧಿಕಾರ ಕಾಯ್ದೆ-2005ಕ್ಕೆ ತಿದ್ದುಪಡಿ ತರುವುದಕ್ಕೂ ಮೊದಲು ಮಗಳು ಮೃತಪಟ್ಟಿದ್ದಾಳೆ ಎನ್ನುವ ಕಾರಣದಿಂದಾಗಿ ಆಕೆಯ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇಲ್ಲ ಎಂದು ಹೇಳಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣವೇನು?: 2023ರ ಅಕ್ಟೋಬರ್ 3ರಂದು ಗದಗ ಪ್ರಧಾನ ಸಿವಿಲ್ ನ್ಯಾಯಾಲಯ ಮೃತ ಪುತ್ರಿಯರ ಕಾನೂನಾತ್ಮಕ ವಾರಸುದಾರರಿಗೆ ಅವರ ಪೂರ್ವಜರ ಆಸ್ತಿಯಲ್ಲಿ ಸಮಪಾಲು ನೀಡಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಚನ್ನಬಸಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT