ಬೆಂಗಳೂರು: ‘ಸರ್ಕಾರದ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ, ಸಚಿವರ ಓಡಾಟಕ್ಕೆ ಅಗತ್ಯವಾದ ಹೆಲಿಕಾಪ್ಟರ್ ಮತ್ತು ಲಘು ವಿಮಾನಗಳ ಸೇವೆಯನ್ನು ಒದಗಿಸಲು ಟೆಂಡರ್ ಕರೆಯುವ ವಿಚಾರದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಅಧಿಕಾರಿಗಳ ಜೊತೆ ಸೋಮವಾರ ಅವರು ಚರ್ಚೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಶಿವಕುಮಾರ್, ‘ಈ ವಿಚಾರ ಅನೇಕ ವರ್ಷಗಳಿಂದ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡಿದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.