ಬೆಂಗಳೂರು: ಅಂತೂ ಇಂತೂ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಪ್ರಹಸನಕ್ಕೆ ತೆರೆಬಿದ್ದಂತೆ ಕಾಣುತ್ತಿದೆ. ಹೈಕಮಾಂಡ್ನ ಬಹುತೇಕ ನಾಯಕರು ಡಿಸಿಎಂ ಡಿ.ಕೆ. ಶಿವಕುಮಾರ್ ಪರ ನಿಂತಿದ್ದಾರೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರನ್ನು ರಾಜೀನಾಮೆಗೆ ಸೂಚಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿ ಮಾಡಿದೆ.

ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬುಧವಾರ ಬೆಂಗಳೂರಿಗೆ ಬರಲಿದ್ದಾರೆ. ಅಧಿಕಾರ ಹಸ್ತಾಂತರದ ಪ್ರಕ್ರಿಯೆ ನೋಡಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಿರುವ ಹೈಕಮಾಂಡ್, ರಾಷ್ಟ್ರ ರಾಜಕಾರಣದಲ್ಲಿ ದೊಡ್ಡಪಾತ್ರ ನಿರ್ವಹಣೆಗೆ ಸೂಚಿಸಿದೆ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ನಿರ್ಧರಿಸಲು ಸಿದ್ದರಾಮಯ್ಯ ಸಮಯ ಕೇಳಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ ಗುರುವಾರ ಸಿದ್ದರಾಮಯ್ಯ ಸಚಿವರನ್ನು ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದು, ರಾಜೀನಾಮೆ ಘೋಷಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಆಪ್ತರಾದ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎನ್ನಲಾಗುತ್ತಿದೆ.

ಈ ನಡುವೆ ದೇಶದಲ್ಲಿರುವ ಏಕೈಕ ಒಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದು, ಸೂಕ್ಷ್ಮವಾಗಿ ಅಧಿಕಾರ ಹಸ್ತಾಂತರ ನಿರ್ವಹಣೆಗೆ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂಗಾದಿಯಿಂದ ಕೆಳಗಿಳಿಯುವ ಸಿದ್ದರಾಮಯ್ಯ ನಿರ್ಧಾರದ ಬಗ್ಗೆ ಆಪ್ತ ವಲಯದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.