ಬೆಂಗಳೂರು: ‘ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷ್ಯ ನುಡಿಯದೆ ಪ್ರತಿಕೂಲ ಸಾಕ್ಷ್ಯ ನುಡಿಯುವವರಿಗೆ ಸರ್ಕಾರದ ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ನೀಡುವುದಕ್ಕೆ ಅವಕಾಶವಿಲ್ಲ’ ಎಂದು ಹೈಕೋರ್ಟ್ ತಿಳಿಸಿದೆ.

ಪ್ರಕರಣವೊಂದರಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಸಂತ್ರಸ್ತೆ ನೀಡಿದ ಪ್ರತಿಕೂಲ ಹೇಳಿಕೆಯ ಆಧಾರದಲ್ಲಿ ಆರೋಪಿ ಖುಲಾಸೆಗೊಂಡಿದ್ದಾನೆ. ಆದ್ದರಿಂದ, ಪ್ರತಿಕೂಲ ಹೇಳಿಕೆ ನೀಡಿದ ಸಂತ್ರಸ್ತೆಗೆ ಪರಿಹಾರ ನೀಡಲು ನಿರ್ದೇಶಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ಎ.ಎಸ್.ವಿಘ್ನೇಶ್ ವಾದ ಮಂಡಿಸಿದ್ದರು.

ಪ್ರಕರಣ: ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಆರೋಪದ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ 21 ವರ್ಷದ ಸಂತ್ರಸ್ತೆ ತನಿಖಾಧಿಕಾರಿ ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆ ದಾಖಲಿಸಿದ್ದರು. ಆದರೆ, ವಿಚಾರಣಾ ನ್ಯಾಯಾಲಯದಲ್ಲಿನ ಪಾಟಿ ಸವಾಲು ಸಂದರ್ಭದಲ್ಲಿ ತಮ್ಮ ಮೊದಲಿನ ಹೇಳಿಕೆಗೆ ತದ್ವಿರುದ್ದ ವಿವರಣೆ ನೀಡಿದ್ದರು. ಇದರಿಂದ ವಿಚಾರಣಾ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿತ್ತು.

ಆದರೆ, ಈ ಅಂಶವನ್ನು ಪರಿಗಣಿಸದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಸಂತ್ರಸ್ತೆಗೆ ₹3 ಲಕ್ಷ ಪರಿಹಾರ ವಿತರಿಸುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದರು. ಈ ಕ್ರಮವನ್ನು ಪ್ರಶ್ನಿಸಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೈಕೋರ್ಟ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.