ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಇನ್ಸ್ಪೆಕ್ಟರ್ ಪಿ.ಜಿ.ಸಂದೇಶ್ ಬಂಧನದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಈ ಕುರಿತಂತೆ ಪಿ.ಜಿ.ಸಂದೇಶ್ ಮತ್ತು ಇಬ್ಬರು ಮಹಿಳೆಯರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಇನ್ಸ್ಪೆಕ್ಟರ್ ಅವರನ್ನು ಬಂಧಿಸ ದಂತೆ ಮಧ್ಯಂತರ ತಡೆ ನೀಡಬೇಕು’ ಎಂಬ ಅರ್ಜಿದಾರರ ಪರ ವಕೀಲರ ಮನವಿಯನ್ನು ನಿರಾಕರಿಸಿದ ನ್ಯಾಯ ಪೀಠ, ‘ಇನ್ಸ್ಪೆಕ್ಟರ್ ಮಾಡಿರು ವುದು ಅಧಿಕಾರದ ದುರುಪಯೋಗ ವಲ್ಲವೇ’ ಎಂದು ಖಾರವಾಗಿ ಪ್ರಶ್ನಿಸಿತು. ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿತು.

ಪ್ರಕರಣ: ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿದ ಆರೋಪದಡಿ ಸಂದೇಶ್ ವಿರುದ್ದ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್ಎಸ್) ಕಲಂ 376(2)(ಎ)(1), 376(2)(ಎನ್), 384, 506 ಅಡಿ ಎಫ್ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.