ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿನಾಯಿ ನಿಯಂತ್ರಣ ಅರಿವು ಮೂಡಿಸಿ: ಹೈಕೋರ್ಟ್‌

Published 15 ನವೆಂಬರ್ 2023, 16:29 IST
Last Updated 15 ನವೆಂಬರ್ 2023, 16:29 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಗ್ರಾಮೀಣ ಅಥವಾ ಸ್ಥಳೀಯ ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಬೇಕು‘ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಈ ಸಂಬಂಧ ಎಲ್‌.ರಮೇಶ್‌ ನಾಯಕ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರಿ ವಕೀಲರು, ‘ಬೀದಿನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ₹ 5 ಸಾವಿರ ಹಾಗೂ ಜೀವ ಕಳೆದುಕೊಂಡವರಿಗೆ ₹ 5 ಲಕ್ಷ ಪರಿಹಾರ ನೀಡುವ ಬಗ್ಗೆ 2023ರ ಅಕ್ಟೋಬರ್ 6ರಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗಿದೆ‘ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮಾರ್ಗಸೂಚಿಗಳ ಮಾಹಿತಿ ಒಳಗೊಂಡ ಕಿರುಚಿತ್ರ ಪ್ರಸಾರ ಮಾಡುವಂತೆ ಪ್ರಾದೇಶಿಕ ಟಿವಿ ಮಾಧ್ಯಮ ಮತ್ತು ಚಿತ್ರಮಂದಿರಗಳ ಮಾಲೀಕರಿಗೆ ಮನವಿ ಮಾಡಿ. ಮುಂದಿನ ನಾಲ್ಕು ವಾರಗಳಲ್ಲಿ ಮತ್ತೊಂದು ಸಭೆ ನಡೆಸಿ ವರದಿ ತಯಾರಿಸಿ‘ ಎಂದು ಸೂಚಿಸಿ ವಿಚಾರಣೆಯನ್ನು ಆರು ವಾರಗಳ ಕಾಲ ಮುಂದೂಡಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT