ಬೆಂಗಳೂರು: ‘ಇಂದಿನ ಯುದ್ಧದ ಸಂದರ್ಭದಲ್ಲಿ ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತ ಸರ್ಕಾರ ಶಕ್ತಿಮೀರಿ ಕೆಲಸ ಮಾಡುತ್ತಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ‘ಅಡುಗೆ ಅನಿಲ ಪೂರೈಕೆಯಲ್ಲಿನ ವ್ಯತ್ಯಯ ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಲಾದ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಈ ಸಂಬಂಧ, ‘ಬೆಂಗಳೂರು ಹೋಟೆಲ್ಗಳ ಸಂಘ’ದ ಕಾರ್ಯದರ್ಶಿ ವೀರೇಂದ್ರ ಎನ್.ಕಾಮತ್ ಸೇರಿದಂತೆ ಒಟ್ಟು ಐವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸುತ್ತದೆ. ಹಂಚಿಕೆದಾರರಿಂದ ಎಲ್ಪಿಜಿ ಪೂರೈಕೆಯಲ್ಲಿ ವಂಚನೆ ಕಂಡುಬಂದರೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದರು.

‘ಕೆಲವು ಬೆಳವಣಿಗೆಗಳು ಕೇಂದ್ರದ ನಿಯಂತ್ರಣದಲ್ಲಿ ಇಲ್ಲ. ಪ್ರತಿದಿನವೂ ಪರಿಸ್ಥಿತಿ ಬದಲಾಗುತ್ತಿದೆ. ಆದಾಗ್ಯೂ, ಎಲ್ಪಿಜಿ ಪೂರೈಕೆಯಲ್ಲಿ ಕೊರತೆಯಾಗುವುದನ್ನು ತಪ್ಪಿಸಲು ಭಾರತ ಸರ್ಕಾರ ಸಾಧ್ಯವಾದ ಎಲ್ಲ ಶ್ರಮ ಹಾಕುತ್ತಿದೆ. ಈ ವಿಚಾರವನ್ನು ಕಾರ್ಯಾಂಗದ ವಿವೇಚನೆಗೇ ಬಿಡಬೇಕು’ ಎಂದು ಪ್ರತಿಪಾದಿಸಿ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದರು.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಸತೀಶ್ ಭಟ್, ‘ಎಲ್ಪಿಜಿ ಪೂರೈಕೆಯಲ್ಲಿ ಕೇರಳ ಮತ್ತು ತಮಿಳುನಾಡಿನ ಪರಿಸ್ಥಿತಿ ಚೆನ್ನಾಗಿದೆ. ಕೆಲವು ಮಾರ್ಗಸೂಚಿ ಅನುಸರಿಸಿದರೆ ರಾಜ್ಯದಲ್ಲೂ ಪರಿಸ್ಥಿತಿ ಸುಧಾರಣೆಯಾಗುತ್ತದೆ’ ಎಂದರು.

ಇದಕ್ಕೆ ಮೆಹ್ತಾ ಅವರು, ‘ಇಂಥ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಿಲುವು ತಳೆಯಬೇಕು’ ಎಂದರು. ಅಂತೆಯೇ, ಎಲ್ಪಿಜಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡಲು ಬಾಂಬೆ ಹೈಕೋರ್ಟ್ ಈಗಾಗಲೇ ನಿರಾಕರಿಸಿದೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರ ಮನವಿಯನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಲಾಗದು. ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ನ್ಯಾಯಾಲಯಗಳು ಇಂತಹ ವಿಚಾರದಲ್ಲಿ ಭಾಗಿಯಾಗಬಾರದು. ಈ ವಿಚಾರವು ಸರ್ಕಾರದ ನೀತಿಯ ಭಾಗವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಆದಾಗ್ಯೂ, ‘ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅರ್ಜಿದಾರರು ಪರಿಸ್ಥಿತಿಯ ಮನವರಿಕೆ ಮಾಡಿಕೊಡಬಹುದು’ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.