ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ; ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಎಸ್.ಕೆ.ಬಸವರಾಜನ್ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಶರಣರ ವಿರುದ್ಧದ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದ ಸಮಯದಲ್ಲಿ ಎಸ್.ಕೆ.ಬಸವರಾಜನ್ ತಮ್ಮ ಎರಡು ಸಾಕ್ಷ್ಯಗಳನ್ನು ಪರಿಗಣಿಸುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಕೋರಿದ್ದರು. ಈ ಕೋರಿಕೆಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಬಸವರಾಜನ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.

‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಸಲ್ಲಿಸಿದ್ದ ದೂರನ್ನು ಆಧರಿಸಿ, ಶಿವಮೂರ್ತಿ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸದ್ಯ ಈ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣವನ್ನು ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ನಿಗದಿಪಡಿಸಿದ ಸಮಯದ ಚೌಕಟ್ಟಿನಲ್ಲಿ ವಿಚಾರಣೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.