ಬೆಂಗಳೂರು: ‘ಕೌಟುಂಬಿಕ ಕಲಹ ಪ್ರಕರಣದಲ್ಲಿ, ಪತ್ನಿಯು ಪತಿಯಿಂದ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಹಿಂದೂ ವಿವಾಹ ಕಾಯ್ದೆಯಡಿ ಎರಡರಿಂದಲೂ ಜೀವನಾಂಶ ಪಡೆ ಯಲು ಅವಕಾಶವಿದೆ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ‘ಜೀವನಾಂಶದ ಪ್ರಮಾಣವನ್ನು ನ್ಯಾಯಾಲಯವೇ ಹೊಂದಾಣಿಕೆ ಮಾಡ ಬಹುದು’ ಎಂದು ಅಭಿಪ್ರಾಯಪಟ್ಟಿದೆ.

ಈ ಸಂಬಂಧ 34 ವರ್ಷದ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು,‘ಒಂದು ಕಾಯ್ದೆಯಡಿ ಜೀವನಾಂಶ ನೀಡಲಾಗಿದೆ ಎಂಬ ಕಾರಣಕ್ಕೆ ಮತ್ತೊಂದು ಕಾಯ್ದೆಯಡಿ ಜೀವನಾಂಶ ನೀಡಲಾಗದು ಎಂದು ಹೇಳಲು ಸಾಧ್ಯವಿಲ್ಲ. ಎರಡೂ ಕಾಯ್ದೆಯಡಿ ಜೀವನಾಂಶದ ಪ್ರಮಾಣವನ್ನು ನ್ಯಾಯಾಲಯವೇ ಹೊಂದಾಣಿಕೆ ಮಾಡಬೇಕು’ ಎಂದು ಪತಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣವೇನು?: ಅರ್ಜಿದಾರ ಪತಿ 2018ರಲ್ಲಿ 28 ವರ್ಷದ ತರುಣಿಯನ್ನು ವಿವಾಹವಾಗಿದ್ದರು. ದಂಪತಿಗೆ ಸಂತಾನ ಇರಲಿಲ್ಲ. ಏತನ್ಮಧ್ಯೆ, ‘ಪತಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದ ಪತ್ನಿ2020ರ ಡಿಸೆಂಬರ್ 11ರಲ್ಲಿಪತಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಸ್ಥಳೀಯ ಕೌಟುಂಬಿಕ ನ್ಯಾಯಾಲಯವು ಜೀವನ ನಿರ್ವಹಣಾ ವೆಚ್ಚವೆಂದು ಪ್ರತಿ ತಿಂಗಳೂ ₹ 20 ಸಾವಿರ ನೀಡುವಂತೆ ಮಾಡಿದ್ದ ಪತ್ನಿಯ ಮಧ್ಯಂತರ ಮನವಿಯನ್ನು ಪುರಸ್ಕರಿಸಿತ್ತು. ಈ ಆದೇಶವನ್ನು ಪತಿ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿ
ದ್ದರು. ಸೆಷನ್ಸ್ ನ್ಯಾಯಾಲಯ ಇದನ್ನು ತಿರಸ್ಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.