ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪತಿಯ ಕೊಲೆ ಆರೋಪಿ ಮಹಿಳೆಗೆ ಹೈಕೋರ್ಟ್‌ ಜಾಮೀನು

Published 20 ಜೂನ್ 2024, 23:30 IST
Last Updated 20 ಜೂನ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಿಯಕರನೊಂದಿಗೆ ಅನೈತಿಕ ಸಂಬಂಧ ಮುಂದುವರಿಸಲು ಅಡ್ಡಿಯಾದ ಎಂಬ ಕಾರಣಕ್ಕೆ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಾರೆ’ ಎಂಬ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಮಹಿಳೆಗೆ‌ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಕುಣಿಗಲ್‌ ನಿವಾಸಿ ಹರ್ಷಿತಾ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಅರ್ಜಿದಾರರ ಪರ ವಕೀಲ ಡಿ.ಮೋಹನ್‌ ಕುಮಾರ್‌ ವಾದ ಮನ್ನಿಸಿರುವ ನ್ಯಾಯಪೀಠ, ‘ಅರ್ಜಿದಾರರು
₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌, ಅಷ್ಟೆ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ನಿಯಮಿತವಾಗಿ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಸಾಕ್ಷ್ಯಾಧಾರ ತಿರುಚಲು ಯತ್ನಿಸಬಾರದು. ಇದೇ ಮಾದರಿಯ ಅಪರಾಧಗಳಲ್ಲಿ ಭಾಗಿಯಾಗಬಾರದು’ ಎಂಬ ಷರತ್ತು ವಿಧಿಸಿದೆ. ಕೊಲೆ ಪ್ರಕರಣಕ್ಕೆ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 302ರ ಅಡಿಯಲ್ಲಿ ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT