ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್‌: ಕೇಂದ್ರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್

Published 9 ಜನವರಿ 2024, 16:19 IST
Last Updated 9 ಜನವರಿ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಿದ್ಧಪಡಿಸಲು ಬಳಸುವ ಕಚ್ಚಾವಸ್ತು ಪಾಲಿ ಎಥಿಲೀನ್‌ಗೆ ಗುಣಮಟ್ಟ ನಿಯಂತ್ರಣ ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಈ ಸಂಬಂಧ ಕೇಂದ್ರ ಸರ್ಕಾರ 2021ರ ಏಪ್ರಿಲ್ 15ರಂದು ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಅಖಿಲ ಭಾರತ ಎಚ್‌ಡಿಪಿಇ (ಹೈಡೆನ್ಸಿಟಿ ಪಾಲಿ ಎಥಿಲೀನ್‌–ಪಿಪಿ) ಮತ್ತು ಪಾಲಿಪ್ರೊಪಿಲೀನ್‌ ಫ್ಯಾಬ್ರಿಕ್‌ ತಯಾರಿಕಾ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಮೇಕ್ ಇನ್ ಇಂಡಿಯಾ ಯೋಜನೆಯಡಿ ಸಿದ್ಧಗೊಳ್ಳುವ ಉತ್ಪನ್ನಗಳಲ್ಲಿ ಗುಣಮಟ್ಟ ಕಾಯ್ದುಕೊಂಡಲ್ಲಿ ಮಾತ್ರ ವಿಶ್ವದ ಇತರ ದೇಶಗಳೊಂದಿಗೆ ಪೈಪೋಟಿ ನಡೆಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಎಲ್ಲ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಆದ್ದರಿಂದ, ಕೇಂದ್ರ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ‘ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT