ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಶಕ್ತ ಸಂಪಾದನೆಯ ಪತಿಗೆ ಜೀವನಾಂಶ ಕೇಳುವ ಹಕ್ಕಿಲ್ಲ: ಹೈಕೋರ್ಟ್

Last Updated 13 ಜುಲೈ 2022, 2:58 IST
ಅಕ್ಷರ ಗಾತ್ರ

ಬೆಂಗಳೂರು: 'ಆರ್ಥಿಕವಾಗಿ ಸಂಪಾದನೆ ಮಾಡುವ ಸಾಮರ್ಥ್ಯ ಹೊಂದಿರುವ ಸಶಕ್ತ ಪುರುಷ ತನ್ನ ಪತ್ನಿಯಿಂದ ಶಾಶ್ವತ ಜೀವನಾಂಶ ಕೇಳಲು ಅವಕಾಶವಿಲ್ಲ' ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಉಡುಪಿಯ ಬಡನಿಡಿಯೂರು ಗ್ರಾಮದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

'ದೇವಾಲಯವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಮೇಲ್ಮನವಿದಾರರು ಕೆಲಸ ಕಳೆದುಕೊಂಡಿದ್ದು, ತಮ್ಮ ಜೀವನ ನಿರ್ವಹಣೆಗೆ ಯಾವುದೇ ಆದಾಯವಿಲ್ಲ' ಎಂದು ಮಂಡಿಸಿದ್ದ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ಹಿಂದೂ ವಿವಾಹ ಕಾಯ್ದೆಯ ಕಲಂ 25ರ ಅಡಿ ಪತ್ನಿಯಿಂದ ಜೀವನಾಂಶ ಕೋರಿದ್ದ ಪತಿಯ ಅರ್ಜಿಯನ್ನು ವಜಾಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT