ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರಿಗೆ ಕಾನೂನು ನೆರವು ನೀಡಲು ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಕರೆ

Last Updated 18 ಜೂನ್ 2022, 18:54 IST
ಅಕ್ಷರ ಗಾತ್ರ

ಬೆಂಗಳೂರು:‘ಅತ್ಯಾಚಾರ, ಗಲಾಟೆ, ಗಲಭೆಗಳಲ್ಲಿ ನೊಂದ ಸಂತ್ರಸ್ತರಿಗೆ ಹಾಗೂ ಬಡವರಿಗೆ ಉಚಿತ ಕಾನೂನು ಅರಿವಿನ ನೆರವು ನೀಡಲು ಕಾನೂನು ಕಾಲೇಜುಗಳು ಮುಂದೆ ಬರಬೇಕು’ ಎಂದುಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆದ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯ, ವಿಶ್ವವಿದ್ಯಾಲಯ ಕಾನೂನು ಕಾಲೇಜು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹ ಯೋಗದೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಎಚ್ಚೆನ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ 'ಕಾನೂನು ಸೇವೆಗಳ ಚಟುವಟಿಕೆ’ಯ ವಲಯ ಮಟ್ಟದ ಕಾರ್ಯಾಗಾರ
ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಉಚಿತ ಕಾನೂನು ಅರಿವು-ನೆರವನ್ನು ಜನಸಾಮಾನ್ಯರಿಗೆ ತಲುಪಿಸು ವಲ್ಲಿ ನ್ಯಾಯಾಧೀಶರು, ವಕೀಲರು, ಕಾನೂನು ಕಾಲೇಜುಗಳ ಪ್ರಾಧ್ಯಾಪಕರು ಹಾಗೂ ಕಾನೂನು ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾದದ್ದು’ ಎಂದರು.

‘ಇತ್ತೀಚೆಗೆ ಯುವತಿಯೊಬ್ಬರ ಮೇಲೆ ಆ್ಯಸಿಡ್ ಎರಚಿದ ಘಟನೆಯಲ್ಲಿ ಸಂತ್ರಸ್ತೆಗೆ ₹ 4 ಲಕ್ಷ ಪರಿಹಾರವನ್ನು ತಾತ್ಕಾಲಿಕ ಹಣವಾಗಿ ಬಿಡುಗಡೆ ಮಾಡುವಲ್ಲಿ ಕಾನೂನು ಸೇವಾ ಪ್ರಾಧಿಕಾರದ ಪ್ರಮುಖ ಪಾತ್ರ ವಹಿಸಿದೆ. ಮಹಿಳೆಯರು ಯಾವುದೇ ಸಂಕೋಚವಿಲ್ಲದೆ ಆಯಾ ತಾಲ್ಲೂಕು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳಿಗೆ ಭೇಟಿ ನೀಡಿ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎನ್‌ಸಿಸಿಗಳನ್ನು ಬಳಸಿಕೊಂಡು ಕಾನೂನು ಅರಿವು ಕಾರ್ಯಕ್ರಮವನ್ನು ಯಶಸ್ವಿಗೊಳಿಸ
ಬೇಕು’ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಎಚ್. ಶಶಿಧರ್ ಶೆಟ್ಟಿ, ವಿಜ್ಞೇಶ್ ಕುಮಾರ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು, ಹೈಕೋರ್ಟ್‌ ವಕೀಲರಾದ ಶ್ರೀಧರ್ ಪ್ರಭು ಅವರು; ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ ಹಾಗೂ ಅದರ ಗುರಿ–ಉದ್ದೇಶಗಳು, ಕಾನೂನು ಕಾಲೇಜುಗಳಲ್ಲಿ ಕಾನೂನು ಸೇವಾ ಕೇಂದ್ರಗಳ ಸ್ಥಾಪನೆ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾನೂನು ಶಿಬಿರಗಳ ಆಯೋಜನೆ ಕುರಿತಂತೆ ಉಪನ್ಯಾಸ ನೀಡಿದರು. ಸುರೇಶ್ ವಿ. ನಾಡಗೌಡರ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕಾನೂನು ಕಾಲೇಜುಗಳ ಮುನ್ನೂರಕ್ಕೂ ಹೆಚ್ಚು ಉಪನ್ಯಾಸಕರು, ಕಾನೂನು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT