ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಮಾರಾಟ: ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ

Published 15 ಫೆಬ್ರುವರಿ 2024, 15:48 IST
Last Updated 15 ಫೆಬ್ರುವರಿ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 16ರಂದು ನಡೆಯಲಿರುವ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಮತದಾನದ ಮುನ್ನ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಸಂಬಂಧ ನಿಷೇಧವನ್ನು ಕೇವಲ ಮತ ಎಣಿಕೆ ಹಾಗೂ ಮತದಾನದ ದಿನಕ್ಕೆ ಮಾತ್ರವೇ ಸೀಮಿತಗೊಳಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿದೆ.

ಮದ್ಯ ಮಾರಾಟ ನಿಷೇಧವನ್ನು ಒಂದು ದಿನಕ್ಕೆ ಸೀಮಿತಗೊಳಿಸಿ ಬುಧವಾರವಷ್ಟೇ (ಫೆ.14) ನೀಡಲಾಗಿದ್ದ ಏಕಸದಸ್ಯ ನ್ಯಾಯಪೀಠ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು‌. ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿತು.

‘ಮತದಾನಕ್ಕೂ ಮುನ್ನ 48 ಗಂಟೆ ಹಾಗೂ ಮತ ಎಣಿಕೆ ದಿನದಂದು ಆಹಾರ ಪೂರೈಸಲು ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ’ ಎಂದೂ ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ. ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್ ಹಾಜರಾಗಿದ್ದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಇದೇ 1ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ, ‘ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘಟನೆ‘ ಕಾರ್ಯದರ್ಶಿ ವೀರೇಂದ್ರ ಎನ್‌.ಕಾಮತ್‌ ಸೇರಿದಂತೆ ಒಟ್ಟು ನಾಲ್ವರು ಹೈಕೋ‌ರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮದ್ಯ ಮಾರಾಟ ನಿಷೇಧವನ್ನು ಮತದಾನದ ಮತ್ತು ಮತ ಎಣಿಕೆಯ ದಿನಕ್ಕೆ ಮಾತ್ರವೇ ಸೀಮಿತಗೊಳಿಸಿ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT