ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಹರಣ ಪ್ರಕರಣ ಸಂಬಂಧ ರೇವಣ್ಣ ಅರ್ಜಿ: ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ನೋಟಿಸ್

Published 31 ಮೇ 2024, 9:22 IST
Last Updated 31 ಮೇ 2024, 9:22 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮನೆ ಕೆಲಸದಾಕೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಶಾಸಕ ಎಚ್.ಡಿ‌.ರೇವಣ್ಣ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ರೇವಣ್ಣ ಸಲ್ಲಿಸಿರುವ ಅರ್ಜಿಗಳನ್ನು "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.

ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಹಾಜರಿದ್ದರು.

ಮೈಸೂರು ಜಿಲ್ಲೆಯ ಕೆ.ಆರ್‌. ನಗರ ಮತ್ತು ಹಾಸನ‌ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್‌ ಠಾಣೆಗಳಲ್ಲಿ ರೇವಣ್ಣ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ. ಇವುಗಳನ್ನು ರದ್ದುಪಡಿಸಲು ರೇವಣ್ಣ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT