ಬೆಂಗಳೂರು: ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ಪದಾಧಿಕಾರಿಗಳ ಹುದ್ದೆಗೆ ಹೊಸದಾಗಿ ಚುನಾವಣೆ ನಡೆದು 12 ಸದಸ್ಯರು ಆಯ್ಕೆಯಾಗಿದ್ದರೂ ಈ ಹಿಂದಿನ ಪದಾಧಿಕಾರಿಗಳಿಬ್ಬರು ಅನಧಿಕೃತವಾಗಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

‘ಸರ್ಕಾರ ಕೆಎಂಸಿಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡುವಲ್ಲಿ ವಿಫಲವಾಗಿದೆ’ ಎಂದು ಆಕ್ಷೇಪಿಸಿ ಮಂಗಳೂರಿನ ಡಾ.ಶ್ರೀನಿವಾಸ ಬಿ.ಕಕ್ಕಿಲಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕರ್ನಾಟಕ ವೈದ್ಯಕೀಯ ಮಂಡಳಿ ರಿಜಿಸ್ಟ್ರಾರ್, ಡಾ.ವಿ.ಕಂಚಿ ಪ್ರಲ್ಹಾದ್ ಮತ್ತು ಡಾ.ನಾಗರಾಜ್ ಅಣ್ಣೇಗೌಡ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅಂತೆಯೇ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜೂನ್ 13ಕ್ಕೆ ಮುಂದೂಡಿದೆ.

‘ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಹೊಸದಾಗಿ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಈ ಹಿಂದೆ ಅಂದರೆ 2011ರಲ್ಲಿ ಸದಸ್ಯರಾಗಿ ಆಯ್ಕೆಯಾಗಿದ್ದ ಡಾ.ವಿ.ಕಂಚಿ ಪ್ರಲ್ಹಾದ್ ಮತ್ತು ಡಾ.ನಾಗರಾಜ್ ಅಣ್ಣೇಗೌಡ ಅನಧಿಕೃತವಾಗಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ, ಅವರನ್ನು ಆ ಸ್ಥಾನಗಳಿಂದ ತೆರವುಗೊಳಿಸಲು ನಿರ್ದೇಶಿಸಬೇಕು. ಶೀಘ್ರವೇ ಐವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.