ಬೆಂಗಳೂರು: ‘ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ’ ಎಂದು ಆರೋಪಿಸಿ ಅಂದಿನ ಶಾಸಕ ಜಿ.ಮಂಜುನಾಥ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

‘ನನ್ನ ವಿರುದ್ಧದ ಎಫ್ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಜಿ.ಮಂಜುನಾಥ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಪ್ರಕಟಿಸಿದರು. ಸರ್ಕಾರದ ಪರ ಹಿರಿಯ ವಕೀಲ ಸಿ.ಜಗದೀಶ್ ವಾದ ಮಂಡಿಸಿದ್ದರು.

ಜಾತಿ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಕೈಗೊಂಡಿದ್ದ ನಿರ್ಣಯವನ್ನು ಪ್ರಶ್ನಿಸಿ ಸದ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಕಾಂಗ್ರೆಸ್ ಪಕ್ಷದ ಜಿ.ಮಂಜುನಾಥ್ (ಕೊತ್ತೂರು ಮಂಜುನಾಥ್) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗಷ್ಟೇ ತಿರಸ್ಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.