ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್ಐ ನೇಮಕಾತಿ ಹಗರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆ ಪೀಠ

Last Updated 27 ಜನವರಿ 2023, 16:27 IST
ಅಕ್ಷರ ಗಾತ್ರ

ಬೆಂಗಳೂರು: ‘ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ದಾಖಲಾಗಿರುವ ಎಫ್ಐಆರ್ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು’ ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ಮುಖ್ಯ‌ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಹಿಂದೆ ಸರಿದಿದೆ.

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಈ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು. ಪ್ರಕರಣವನ್ನು ಬೇರೊಂದು ಪೀಠದ ಮುಂದೆ ನಿಗದಿಗೊಳಿಸಲು ಪೀಠವು ಆದೇಶಿಸಿತು.

ಅರ್ಜಿಯಲ್ಲಿ ಏನಿದೆ?: 'ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ವಿವಿಧೆಡೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಸಿಐಡಿಗೆ ಆದೇಶಿಸಬೇಕು. ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮೃತ್ ಪೌಲ್ ಬಂಧನದ ನಂತರದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಸಲು ರಾಜ್ಯ ಸರ್ಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು' ಎಂದು ಅರ್ಜಿಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT