ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳೆಗೇರಿ ವಸತಿ ನಿರ್ಮಾಣ: ಜಾಗ ಮೀಸಲು ಪ್ರಶ್ನಿಸಿದ ಅರ್ಜಿ ವಜಾ

Published 12 ಫೆಬ್ರುವರಿ 2024, 23:43 IST
Last Updated 12 ಫೆಬ್ರುವರಿ 2024, 23:43 IST
ಅಕ್ಷರ ಗಾತ್ರ

ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಸೇರಿದ ಜಾಗದಲ್ಲಿ ಕೆಲ ಭಾಗವನ್ನು ಕೊಳೆಗೇರಿ ನಿವಾಸಿಗಳ ವಸತಿ ನಿರ್ಮಾಣಕ್ಕೆ ನಿಗದಿಪಡಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ‘ಕೇಂದ್ರ ಪರಿಹಾರ ಸಮಿತಿ’ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ‘ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಸೇರಿದ ಜಾಗದಲ್ಲಿ ಹೆಚ್ಚಿನ ಭೂಮಿಯನ್ನು ಪಡೆದಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಆದರೆ, ಈ ಪ್ರಕರಣದಲ್ಲಿ ಅಂತಹ ಪರಿಸ್ಥಿತಿ ಇಲ್ಲವಾದ್ದರಿಂದ ಅರ್ಜಿ ಊರ್ಜಿತವಾಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

‘ರಾಜ್ಯ ಸರ್ಕಾರದ ಒಂದು ಅಂಗವು ಮತ್ತೊಂದು ಅಂಗಸಂಸ್ಥೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದೆ. ಈ ಪ್ರಕರಣದಲ್ಲಿ ಕೊಳೆಗೇರಿ ನಿವಾಸಿಗಳು ಹಲವು ವರ್ಷಗಳಿಂದ ವಸತಿ ಸೌಕರ್ಯವಿಲ್ಲದೆ ಬಳಲುವಂತಾಗಿರುವುದು ಕಂಡು ಬಂದಿದೆ. ಹಾಗಾಗಿ, ರಾಜ್ಯ ಸರ್ಕಾರವೇ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ವ್ಯಾಜ್ಯವನ್ನು ಬಗೆಹರಿಸಲು ಮುಂದಾಗಬೇಕು’ ಎಂದು ನ್ಯಾಯ‍ಪೀಠ ಸಲಹೆ ಮಾಡಿದೆ.

ಪ್ರಕರಣವೇನು?: 

ಮೈಸೂರು ಮಹಾರಾಜರ ಆಡಳಿತಾವಧಿಯಲ್ಲಿ 1941ರಲ್ಲಿ ಯಶವಂತಪುರ ಹೋಬಳಿಗೆ ಸೇರಿದ ಪ್ರದೇಶದಲ್ಲಿನ 311 ಎಕರೆ ಜಮೀನನನ್ನು ಭಿಕ್ಷುಕರ ಪುನರ್ ವಸತಿಗಾಗಿ ಮಂಜೂರು ಮಾಡಲಾಗಿತ್ತು. ಈ ಪೈಕಿ 63 ಎಕರೆ ಜಾಗವನ್ನು ಭಿಕ್ಷುಕರ ಪುನರ್ ವಸತಿಗೆ ಮೀಸಲಿಟ್ಟು, ಉಳಿದ ಜಾಗವನ್ನು ಸುಮನಹಳ್ಳಿ ಕ್ಷಯ ರೋಗಿಗಳ ಪುನರ್ ವಸತಿ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿತ್ತು. ಈ ಜಾಗದಲ್ಲಿ 27 ಎಕರೆಯನ್ನು ಕೊಳೆಗೇರಿ ನಿವಾಸಿಗಳಿಗೆ ಪುನರ್ ವಸತಿ ಮತ್ತಿತರ ಉದ್ದೇಶಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗೆ ಅಧಿಕಾರ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT