ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಲಾದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ರಾಜ್ಯ ಸರ್ಕಾರ 2023ರ ಸೆಪ್ಟೆಂಬರ್ 25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ತೀರ್ಪು ಕಾಯ್ದಿರಿಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಸ್.ಎ.ಅಹ್ಮದ್ ವಾದ ಮುಕ್ತಾಯಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.