ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಗು ಸುಪರ್ದಿ | ಸ್ಥಳೀಯ ಕೋರ್ಟ್‌ಗೆ ಸೀಮಿತ: ಹೈಕೋರ್ಟ್ ಆದೇಶ

Published 18 ಮೇ 2024, 3:37 IST
Last Updated 18 ಮೇ 2024, 3:37 IST
ಅಕ್ಷರ ಗಾತ್ರ

ಬೆಂಗಳೂರು: ‘ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಸುಪರ್ದಿ ಕೋರುವ ಅರ್ಜಿಗಳನ್ನು, ಅರ್ಜಿದಾರರು ವಾಸವಿರುವ ಪ್ರದೇಶಗಳ ವ್ಯಾಪ್ತಿಗೊಳಪಟ್ಟ ನ್ಯಾಯಾಲಯದಲ್ಲಿ ಮಾತ್ರವೇ ಸಲ್ಲಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಪ್ರಕರಣವೊಂದರಲ್ಲಿ  ಚಾಮರಾಜ ನಗರ ಜಿಲ್ಲೆಯ ಸಮೀವುಲ್ಲಾ ಮತ್ತು ಮುಬೀನ್‌ ತಾಜ್‌ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ವಿವರಿಸಿದೆ.

‘ಈ ಪ್ರಕರಣದಲ್ಲಿ ಅರ್ಜಿದಾರರ ಮೊಮ್ಮಗು ಚಾಮರಾಜನಗರದಲ್ಲಿ ನೆಲೆಸಿದೆ. ತಂದೆ ಮಗುವಿನ ಸುಪರ್ದಿ ಕೋರಿ ಮೈಸೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ಮಗುವಿನ ಸುಪರ್ದಿ ಕೋರಿ ಎಲ್ಲೆಂದರಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಮಗು ನೆಲೆಸಿರುವ ವ್ಯಾಪ್ತಿಯ ಸ್ಥಳೀಯ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಬೇಕು. ಹೀಗಾಗಿ, ತಂದೆಯು ಚಾಮರಾಮನಗರದ ಸಂಬಂಧಪಟ್ಟ ನ್ಯಾಯಾಲಯಲ್ಲಿಯೇ ಮಗುವಿನ ಸುಪರ್ದಿಗೆ ಅರ್ಜಿ ಸಲ್ಲಿಸಬೇಕು’ ಎಂದು ತಾಕೀತು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT