ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮಾನ್ಯ ವರ್ಗದ ಸದಸ್ಯಗೆ ಮೀಸಲಾತಿಯಡಿ ಅಧ್ಯಕ್ಷ ಸ್ಥಾನ: ಹೈಕೋರ್ಟ್

Published 10 ನವೆಂಬರ್ 2023, 16:34 IST
Last Updated 10 ನವೆಂಬರ್ 2023, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾಮಾನ್ಯ ವರ್ಗದಿಂದ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ವ್ಯಕ್ತಿ ಸರ್ಕಾರ ಮೀಸಲು ನಿಗದಿಪಡಿಸಿದ ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಅಡಿಯಲ್ಲಿ ಸ್ಪರ್ಧೆ ಮಾಡಬಹುದು‘ ಎಂದು ಹೈಕೋರ್ಟ್ ತಿಳಿಸಿದೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕುನ್ನಲ ಗ್ರಾಮ ಪಂಚಾಯಿತಿ ಸದಸ್ಯೆ ಚೈತ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ–1993ರ ಕಲಂ 5ರ ಅಡಿ ಸದಸ್ಯರ ಆಯ್ಕೆಗೆ ಒದಗಿಸಲಾದ ಮೀಸಲಾತಿಯು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸುವವರಿಗೆ ಪರಿಗಣನೆಗೆ ಬರುವುದಿಲ್ಲ. ಅಲ್ಲದೆ, ಕಲಂ 44ರ ಅಡಿಯಲ್ಲಿ ಉಲ್ಲೇಖಿಸಿರುವಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳಿಗೆ ಅರ್ಹರು ಇಲ್ಲದಿದ್ದಲ್ಲಿ ಜನಸಂಖ್ಯಾ ಆಧಾರದಲ್ಲಿ ಮೀಸಲು ಹುದ್ದೆಗಳನ್ನು ಇತರೆ ಜನಾಂಗದವರಿಗೆ ನೀಡಬಹುದಾಗಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಅದೇ ರೀತಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಜನಸಂಖ್ಯೆಗೆ ಅನುಗುಣವಾಗಿ ಅದ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಭರ್ತಿ ಮಾಡಬಹುದಾಗಿದೆ. ಆದ್ದರಿಂದ, ಸಾಮಾನ್ಯ ವರ್ಗದಿಂದ ಸದಸ್ಯರಾದವರು ಮೀಸಲು ವರ್ಗದಲ್ಲಿ ಅದ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದಾಗಿದೆ‘ ಎಂದು ನ್ಯಾಯಪೀಠ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT