ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13,352 ಶಿಕ್ಷಕರ ನೇಮಕ ಮುಂದುವರಿಸಲು ಹೈಕೋರ್ಟ್ ಆದೇಶ

Published 12 ಅಕ್ಟೋಬರ್ 2023, 23:15 IST
Last Updated 12 ಅಕ್ಟೋಬರ್ 2023, 23:15 IST
ಅಕ್ಷರ ಗಾತ್ರ

ಬೆಂಗಳೂರು: ‘13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಹಿಂದೆ ಆಯ್ಕೆಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಪಡಿಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ತಕರಾರನ್ನು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್‌ಎಟಿ) ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು’ ಎಂದು ಸ್ಪಷ್ಟಪಡಿಸಿದೆ.

‘ರಾಜ್ಯದಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ದೊಡ್ಡ ಪ್ರಮಾಣದಲ್ಲಿ ಖಾಲಿ ಉಳಿದಿವೆ. ಇದರಿಂದ 6ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ, ರಾಜ್ಯ ಸರ್ಕಾರ 2023ರ ಜೂನ್‌ 8ರಂದು ಸಿದ್ಧಪಡಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಾರ 13,352 ಮಂದಿ ಆಯ್ಕೆಯಾದ ಶಿಕ್ಷಕರ ನೇಮಕಾತಿ ಮುಂದುವರಿಸಬಹುದು’ ಎಂದು ತಿಳಿಸಿದೆ.

ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ ಹುಯಿಲಗೋಳ ಅವರ ವಾದ ಮಂಡಿಸಿದ್ದರು.

ಪ್ರಕರಣವೇನು?: ವಿವಾಹಿತ ಮಹಿಳೆಯರು ಪತಿಯ ಆದಾಯದ ಆಧಾರದಡಿ ತಮ್ಮ ಆದಾಯ ಪ್ರಮಾಣ ಪತ್ರವನ್ನು ನೇಮಕಾತಿ ವೇಳೆ ಸಲ್ಲಿಸಬೇಕಿತ್ತು. ಅದರ ಬದಲು, ತಂದೆಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂಬ ಕಾರಣ ನೀಡಿ 451 ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು. ಇದನ್ನು ಪ್ರಶ್ನಿಸಿ, ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. 

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ‘ವಿವಾಹಿತ ಮಹಿಳೆಯ ತಂದೆಯ ಆದಾಯ ಪ್ರಮಾಣಪತ್ರ ಪರಿಗಣಿಸಬೇಕು’ ಎಂದು ಹೇಳಿತ್ತು. ಈ ಆದೇಶವನ್ನು ರದ್ದುಪಡಿಸಬೇಕು ಎಂದು ಮೇಲ್ಮನವಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT