ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಲ್.ಮುರಳೀಧರ ಪೇಶ್ವೆ, ‘ಸಿಬ್ಬಂದಿಗೆ ಹೆಚ್ಚುವರಿ ವೇತನ ಕಡಿತಗೊಳಿಸಲಾಗುತ್ತಿದೆ. ದಿನದಲ್ಲಿ 12 ತಾಸು ಕೆಲಸ ಮಾಡುತ್ತಿರುವ ಮೂರು ಸಾವಿರಕ್ಕೂ ಅಧಿಕ ಸಿಬ್ಬಂದಿಗೆ ತಿಂಗಳಿಗೆ ಕೇವಲ ₹14ರಿಂದ ₹15 ಸಾವಿರ ವೇತನ ದೊರೆಯುತ್ತಿದೆ. ಸಾಲದು ಎಂಬಂತೆ ಎಸ್ಮಾ ಕಾಯ್ದೆ ಜಾರಿ ಮಾಡಲಾಗಿದೆ. ಈ ಅನ್ಯಾಯ ಸರಿಪಡಿಸಿ, ಅವರಿಗೆ ನ್ಯಾಯಯುತ ವೇತನ ಹಾಗೂ ಇತರೆ ಸೌಲಭ್ಯಗಳು ಸಿಗುವಂತೆ ಮಾಡಲು ಕ್ರಮಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದರು. ವಾದ ಆಲಿಸಿ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿತು.