ಬೆಂಗಳೂರು: ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನಸಹಿತ ರಜೆ ನೀಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ನಗರದ ಕೆಲವು ಉದ್ಯೋಗಸ್ಥ ಮಹಿಳೆಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ನಗರದ ಆರ್.ವರ್ಷಾ ಸೇರಿದಂತೆ ಒಟ್ಟು 15 ಮಹಿಳೆಯರು ಸಲ್ಲಿಸಿರುವ ರಿಟ್ ಅರ್ಜಿ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆಗೆ ನಿಗದಿಯಾಗಿದೆ. ಅರ್ಜಿದಾರರ ಪರ ಹೈಕೋರ್ಟ್ನ ಹಿರಿಯ ವಕೀಲೆ ಎಚ್.ಆರ್.ರೇಣುಕಾ ವಕಾಲತ್ತು ವಹಿಸಿದ್ದಾರೆ.
.‘ಪೋಷಣ್’ ಮಾರ್ಗಸೂಚಿ ಪ್ರಶ್ನಿಸಿದ ಅರ್ಜಿ: ಕೇಂದ್ರ–ರಾಜ್ಯಕ್ಕೆ ಹೈಕೋರ್ಟ್ ನೋಟಿಸ್.ಪತ್ನಿಯ ಉನ್ನತ ವಿದ್ಯಾರ್ಹತೆ ಕಾರಣಕ್ಕೆ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್ .
ಅರ್ಜಿಯಲ್ಲಿ ಏನಿದೆ?:

‘ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನಸಹಿತ ರಜೆ ನೀಡುವ ಆದೇಶ ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದೆ. ಇದು ಲಿಂಗ ತಾರತಮ್ಯಕ್ಕೆ ಎಡೆ ಮಾಡಿಕೊಡುತ್ತದೆ. ಮಹಿಳೆಯರು ಪುರುಷರಿಗಿಂತ ದುರ್ಬಲರು ಎಂಬ ಭಾವನೆಯನ್ನು ಉದ್ಯೋಗದಾತರಲ್ಲಿ ಮೂಡಿಸುತ್ತದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ಈ ಆದೇಶವು, ಮಹಿಳಾ ಉದ್ಯೋಗಿಗಳ ನೇಮಕಕ್ಕೆ ಹಾಗೂ ಬಡ್ತಿಗೆ ಕಂಪನಿಗಳು ಹಿಂದೇಟು ಹಾಕುವಂತೆ ಮಾಡುತ್ತದೆ. ತಿಂಗಳಲ್ಲಿ ಒಂದು ದಿನ ಕಡ್ಡಾಯ ರಜೆ ನೀಡುವುದರಿಂದ ಸ್ಪರ್ಧಾತ್ಮಕ ವೃತ್ತಿಜೀವನದಲ್ಲಿ ಮಹಿಳೆಯರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಉದ್ಯೋಗದಾತರಿಗೆ ಹೊರೆ ಹೆಚ್ಚುತ್ತದೆ. ಮಹಿಳಾ ಉದ್ಯೋಗಿಗಳ ದಕ್ಷತೆಯನ್ನು ಕಡಿಮೆ ಮಾಡುತ್ತದೆ ಮತ್ತು ಅವರ ಸಬಲೀಕರಣಕ್ಕೂ ಅಡ್ಡಿಯಾಗುತ್ತದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ಸರ್ಕಾರ ಈ ನೀತಿ ರೂಪಿಸುವಾಗ ಸರ್ಕಾರ ಮಹಿಳೆಯರ ಅಭಿಪ್ರಾಯ ಪಡೆದಿಲ್ಲ. ಇದು ಸಹಜ ನ್ಯಾಯತತ್ವದ ಉಲ್ಲಂಘನೆಯಾಗಿದ್ದು, ರಾಜ್ಯ ಕಾರ್ಮಿಕ ಇಲಾಖೆ ಈ ಸಂಬಂಧ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.