ಬೆಂಗಳೂರು: ‘ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀಶ್ರೀ ರವಿಶಂಕರ ಗುರೂಜಿ ವಿರುದ್ಧ ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ಫೋರ್ಸ್ (ಬಿಎಂಟಿಎಫ್) ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

‘ನನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಶ್ರೀಶ್ರೀ ರವಿಶಂಕರ ಗುರೂಜಿ (68) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಸಕದಸ್ಯ ನ್ಯಾಯಪೀಠ ಪ್ರಕಟಿಸಿದೆ.
.‘ಪೋಷಣ್’ ಮಾರ್ಗಸೂಚಿ ಪ್ರಶ್ನಿಸಿದ ಅರ್ಜಿ: ಕೇಂದ್ರ–ರಾಜ್ಯಕ್ಕೆ ಹೈಕೋರ್ಟ್ ನೋಟಿಸ್.ಪತ್ನಿಯ ಉನ್ನತ ವಿದ್ಯಾರ್ಹತೆ ಕಾರಣಕ್ಕೆ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್ .
ರವಿಶಂಕರ್ ಗುರೂಜಿ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್, ‘ವಾಸ್ತವದಲ್ಲಿ ಒತ್ತುವರಿ ಮಾಡಲಾಗಿದೆ ಎಂಬ ಜಮೀನುಗಳ ಮಾಲೀಕತ್ವಕ್ಕೂ ಮತ್ತು ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಒತ್ತುವರಿ ಟೇಬಲ್ ಕಾಲಂನಲ್ಲೂ ಅವರ ಹೆಸರಿಲ್ಲ. ಪೊಲೀಸರು ಅರ್ಜಿದಾರರ ಜೊತೆಗಿನ ಇತರ ನಾಲ್ವರು ಭೂ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಆದರೆ, ಶ್ರೀಶ್ರೀ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ’ ಎಂದು ಆಕ್ಷೇಪಿಸಿದ್ದರು.

ಈ ವಾದವನ್ನು ಪುರಸ್ಕರಿಸಿರುವ ನ್ಯಾಯಪೀಠ, ‘ಪ್ರಕರಣದಲ್ಲಿ ಶ್ರೀಶ್ರೀ ವಿರುದ್ಧ ಮೇಲ್ನೋಟಕ್ಕೆ ಯಾವುದೇ ಆರೋಪ ಕಾಣಬರುತ್ತಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಪೂರಕವಾದ ದಾಖಲೆಗಳನ್ನು ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ಅವರು ಒದಗಿಸಿಲ್ಲ. ಹೀಗಾಗಿ, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸದ ಹೊರತು ಶ್ರೀಶ್ರೀ ರವಿಶಂಕರ ಅವರನ್ನು ಪ್ರಕರಣದಲ್ಲಿ ಎಳೆದು ತರಲಾಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಂತೆಯೇ, ‘ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ–2023ರ (ಬಿಎನ್ಎಸ್ಎಸ್) ಕಲಂ 528ರ ಅಡಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರವೇ ಸೀಮಿತವಾಗಿದೆ’ ಎಂದು ಸ್ಪಷ್ಟಪಡಿಸಿದೆ.

ಆರೋಪ ಏನು?:

‘ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಶ್ರೀ ವಿರುದ್ಧ, ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 192 ಎ ಅಡಿಯಲ್ಲಿ ಬಿಎಂಟಿಎಫ್, ಎಫ್ಐಆರ್ ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.