ಬೆಂಗಳೂರು: ನಗರದ ಡಿಆರ್ಡಿಒ ಟೌನ್ ಶಿಪ್ ವ್ಯಾಪ್ತಿಯಲ್ಲಿನ ನಾಯಿಗಳನ್ನು ಸ್ಥಳಾಂತರಿಸಿದ ಆರೋಪದಡಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ನೌಕರರ ವಿರುದ್ಧ ದಾಖಲಿಸಿದ್ದ ಎಫ್ಐಆರ್ಗೆ ನೀಡಲಾಗಿರುವ ಮಧ್ಯಂತರ ತಡೆ ಆದೇಶ ತೆರವುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಡಿಆರ್ ಡಿಒ ಟೌನ್ಶಿಪ್ ಎಸ್ಟೇಟ್ ವ್ಯವಸ್ಥಾಪಕ ರಾಕೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 'ಹೆಚ್ಚಿನ ತನಿಖೆಯ ಅಗತ್ಯವಿದ್ದಲ್ಲಿ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಸಂರಕ್ಷಿಸಿ' ಎಂದು ಡಿಆರ್ಡಿಒಗೆ ನಿರ್ದೇಶಿಸಿದೆ.

'ಮುಂದಿನ ವಿಚಾರಣೆವರೆಗೆ ಮಧ್ಯಂತರ ಆದೇಶ ಮುಂದುವರಿಯಲಿದೆ' ಎಂದು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಪ್ರಕರಣ: ಆರೋಪಿ ನೌಕರರ ವಿರುದ್ಧ, ಬೆಂಗಳೂರು ಪೂರ್ವ ವಿಭಾಗದ ಪಶು ಸಂಗೋಪನೆ ಸಹಾಯಕ ನಿರ್ದೇಶಕ ಡಾ.ವಿವೇಕ್, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ದೂರು ಸಲ್ಲಿಸಿದ್ದರು.

ಇದರ ಆಧಾರದ ಅಡಿಯಲ್ಲಿ ಡಿಆರ್ಡಿಒ ಎಸ್ಟೇಟ್ ವ್ಯವಸ್ಥಾಪಕ ಮತ್ತು ಕ್ಲೀನಿಂಗ್ ಸೂಪರ್ ವೈಸರ್ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11 ಮತ್ತು ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್ಎಸ್) ಕಲಂ 240, 325, 270, 61(1)ರ ಅಪರಾಧಗಳಿಗಾಗಿ 2026ರ ಮಾರ್ಚ್ 9ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.