ಬೆಂಗಳೂರು: ‘ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ಮುಂದಾಗುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ತೀವ್ರ ಪ್ರತಿರೋಧ ವ್ಯಕ್ತ ವಾಗುತ್ತಿದ್ದು, ಕಾರ್ಯಾಚರಣೆ ಸಂದರ್ಭದಲ್ಲಿ ಬಂದೋಬಸ್ತ್‌ಗೆ ಸಶಸ್ತ್ರ ಪೊಲೀಸ್ ಸಿಬ್ಬಂದಿ ಅಗತ್ಯವಿದೆ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಹೈಕೋರ್ಟ್, ಸ್ವಯಂಪ್ರೇರಿತವಾಗಿ ದಾಖಲಿಸಿ ಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ಅಶೋಕ್ ಎಸ್. ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಬಿಬಿಎಂಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅನಂತ ಮಂಡಗಿ, ‘ಇತ್ತೀಚೆಗೆ ಶ್ರೀರಾಮಪುರದ ಗಂಗೈಯಮ್ಮನ ದೇವಸ್ಥಾನದ ಒತ್ತುವರಿ ತೆರವಿಗೆ ಹೋಗಿದ್ದಾಗ ಅಧಿಕಾರಿಗಳ ಮೇಲೆ ಸ್ಥಳೀಯರು ದಾಳಿ ನಡೆ ಸಲು ಮುಂದಾಗಿದ್ದರು’ ಎಂದು ಪೀಠದ ಗಮನಕ್ಕೆ ತಂದರು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಅವರೂ ದನಿಗೂಡಿಸಿದರು.

‘ವಿಧಾನಸಭೆ ಅಧಿವೇಶನ ಮುಗಿಯುವತನಕ ಭದ್ರತೆ ನೀಡಲು ಸಾಧ್ಯವಾಗುವುದಿಲ್ಲ ಎನ್ನುತ್ತಿದ್ದಾರೆ’ ಎಂದರು.

‘ಅಧಿವೇಶನದ ನೆಪದಲ್ಲಿ ಪೊಲೀಸರು ಭದ್ರತೆ ನೀಡಲು ನಿರಾಕರಿಸುವಂತಿಲ್ಲ. ನಗರ ಪೊಲೀಸ್ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.