ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸ್ವಯಂ ಸೇವಕ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಇರ್ಫಾನ್ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಅವರ ಜಾಮೀನು ಕೋರಿದ ಅರ್ಜಿ ವಿಚಾರಣೆ ಮಂಗಳವಾರ ಮುಕ್ತಾಯವಾಗಿದ್ದು, ಆದೇಶ ಕಾಯ್ದಿರಿಸಲಾಗಿದೆ.

ಇರ್ಫಾನ್ ಪಾಷ ಮತ್ತು ಮಹಮ್ಮದ್ ಮುಜೀಬುಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ಶಿವಶಂಕರ ಅಮರಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ಆಲಿಸಿತು.

ಆರೋಪಿಗಳ ಪರ ಎಸ್.ಬಾಲಕೃಷ್ಣನ್ ಮತ್ತು ಎನ್ಐಎ ಪರ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದರು.ಪ್ರಕರಣದ ಐವರು ಆರೋಪಿಗಳು 2016ರ ಅ.27ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

2016ರ ಅ.16ರಂದು ಗಣವೇಶಧಾರಿಯಾಗಿದ್ದ ಶ್ರೀನಿವಾಸ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.